ಜಿ.ಎಸ್.ಶಿವರುದ್ರಪ್ಪ - G.S.Shivrudrappa

ಡಾ. ಜಿ ಎಸ್ ಶಿವರುದ್ರಪ್ಪ

(ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩) ಕನ್ನಡದ ಪ್ರಮುಖ ಕವಿಗಳಲ್ಲೊಬ್ಬರು. ಗೋವಿಂದ ಪೈ, ಕುವೆಂಪು ನಂತರ ಮೂರನೆಯ ರಾಷ್ಟ್ರಕವಿಯಾದವರು. ನವೆಂಬರ್ ೧,೨೦೦೬ ಸುವರ್ಣ ಕರ್ನಾಟಕ ರಾಜ್ಯೋತ್ಸವದಂದು ಶಿವರುದ್ರಪ್ಪನವರನ್ನು ರಾಷ್ಟ್ರಕವಿ ಎಂದು ಘೋಷಿಸಲಾಯಿತು.

 

 

ಓದು,ವಿದ್ಯಾಭ್ಯಾಸ

ಡಾ.ಜಿ.ಎಸ್.ಶಿವರುದ್ರಪ್ಪನವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಫೆಬ್ರುವರಿ ೭,೧೯೨೬ ರಂದು ಜನಿಸಿದರು. ತಂದೆ ಶಾಲಾ ಉಪಾಧ್ಯಾಯರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಿ.ಎ. ಆನರ್ಸ್ (೧೯೪೯); ಎಂ.ಎ. (೧೯೫೩) ಪ್ರಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಮೂರು ಸುವರ್ಣ ಪದಕಗಳನ್ನು ಪಡೆದರು. ಕುವೆಂಪುರವರ ಮೆಚ್ಚಿನ ಶಿಷ್ಯರಾಗಿ ಅವರ ಬರವಣಿಗೆ ಮತ್ತು ಜೀವನದಿಂದ ಪ್ರಭಾವಿತರಾಗಿದ್ದರು.೧೯೬೫ರಲ್ಲಿ ತಮ್ಮ ಗುರುಗಳಾದ ಕುವೆಂಪುರವರ ಮಾರ್ಗದರ್ಶನದಲ್ಲಿ ಬರೆದ 'ಸೌಂದರ್ಯ ಸಮೀಕ್ಷೆ' ಎಂಬ ಗ್ರಂಥಕ್ಕೆ ಪಿಹೆಚ್‌ಡಿ ಪದವಿ ಪಡೆದರು.

ವೃತ್ತಿ ಜೀವನ

ತಾವು ಓದಿದ ಮೈಸೂರು ವಿಶ್ವವಿದ್ಯಾಲಯದಲ್ಲೇ ೧೯೪೯ರಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಯನ್ನು ಆರಂಭಿಸಿದರು ೧೯೬೩ರಲ್ಲಿ ಹೈದರಾಬಾದಿನ ಉಸ್ಮಾನಿಯಾ ವಿಶ್ವವಿದ್ಯಾಲಯದ ಆಹ್ವಾನದ ಮೇರೆಗೆ ರೀಡರ್ ಮತ್ತು ಕನ್ನಡ ವಿಭಾಗದ ಮುಖ್ಯಸ್ಥರಾಗಿ ಹೋಗಿ ೧೯೬೬ರ ವರೆವಿಗೂ ಅಲ್ಲಿ ಸೇವೆ ಸಲ್ಲಿಸಿದರು. ೧೯೬೬ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹಾಗೂ ನಿರ್ದೇಶಕರಾಗಿ ಆಯ್ಕೆಯಾಗಿ ೧೯೮೭ರವರೆವಿಗೂ ಕನ್ನಡ ಅಧ್ಯಯನ ಕೇಂದ್ರದಲ್ಲಿ ಸೇವೆ ಸಲ್ಲಿಸಿದರು. ಅವರ ಕಾಲದಲ್ಲೇ ಕನ್ನಡ ವಿಭಾಗವು ಕನ್ನಡ ಅಧ್ಯಯನ ಕೇಂದ್ರವಾಯಿತು.

ಜಿ.ಎಸ್.ಶಿವರುದ್ರಪ್ಪ ಅವರ ಕೃತಿಗಳು

ಜಿ.ಎಸ್.ಶಿವರುದ್ರಪ್ಪ ಅವರ ಕವಿತೆಯೊಂದರ ತುಣುಕು...
ಕಂಡೆ ಗೊಮ್ಮಟನಾಗಿ ನಿಂತಿದ್ದ ಮಹಾಮೂರ್ತಿ
ಕರಗಿ ಕೊಚ್ಚೆಯಾಗಿ ಹರಿದಿದ್ದ ಕಂಡೆ
ಇಂದ್ರನೈರಾವತಕ್ಕೆ ತೊಣಚಿ ಹತ್ತಿ
ಬೀದಿ ನಾಯಾಗಿ ಬೀದಿಯಲ್ಲಿ ಹೊರಳಾಡಿದ್ದ ಕಂಡೆ.
ನಿಗಿ ನಿಗಿ ಉರಿದ ಉಜ್ವಲವಾದ ಮಾತೆಲ್ಲ
ಬರೀ ಬೂದಿಯಾಗಿ ತೆಪ್ಪಗಾದದ್ದ ಕಂಡೆ
ಜಿ.ಎಸ್.ಶಿವರುದ್ರಪ್ಪನವರ ಪ್ರಸಿದ್ಧ ಕವನಗಳು

ಕವನ ಸಂಕಲನಗಳು

  • ಸಾಮಗಾನ
  • ಚೆಲುವು-ಒಲವು
  • ದೇವಶಿಲ್ಪಿ
  • ದೀಪದ ಹೆಜ್ಜೆ
  • ಅನಾವರಣ
  • ತೆರೆದ ಬಾಗಿಲು
  • ಗೋಡೆ
  • ವ್ಯಕ್ತಮಧ್ಯಓರೆ ಅಕ್ಷರಗಳು
  • ತೀರ್ಥವಾಣಿ
  • ಕಾರ್ತಿಕ
  • ಕಾಡಿನ ಕತ್ತಲಲ್ಲಿ
  • ಪ್ರೀತಿ ಇಲ್ಲದ ಮೇಲೆ
  • ಚಕ್ರಗತಿ

ವಿಮರ್ಶೆ/ಗದ್ಯ

  • ಪರಿಶೀಲನ
  • ವಿಮರ್ಶೆಯ ಪೂರ್ವ ಪಶ್ಚಿಮ
  • ಸೌಂದರ್ಯ ಸಮೀಕ್ಷೆ(ಇದು ಅವರ ಪಿಹೆಚ್‌ಡಿ ಪ್ರಬಂಧ)
  • ಕಾವ್ಯಾರ್ಥ ಚಿಂತನ
  • ಗತಿಬಿಂಬ
  • ಅನುರಣನ
  • ಪ್ರತಿಕ್ರಿಯೆ
  • ಕನ್ನಡ ಸಾಹಿತ್ಯ ಸಮೀಕ್ಷೆ
  • ಮಹಾಕಾವ್ಯ ಸ್ವರೂಪ
  • ಕನ್ನಡ ಕವಿಗಳ ಕಾವ್ಯಕಲ್ಪನೆ
  • ಹೊಸಗನ್ನಡ ಕವಿತೆಗಳಲ್ಲಿ ಕಾವ್ಯ ಚಿಂತನ
  • ಕುವೆಂಪು : ಪುನರವಲೋಕನ
  • ಸಮಗ್ರ ಗದ್ಯ ಭಾಗ ೧, ೨ ಮತ್ತು ೩
ಇವಿಷ್ಟೇ ಅಲ್ಲದೆ ಸರ್ಕಾರಕ್ಕಾಗಿ "Kuvempu-a Reappraisal" ಎಂಬ ಗ್ರಂಥವನ್ನು ಬರೆದಿದ್ದಾರೆ.

ಪ್ರವಾಸಕಥನ

  • ಮಾಸ್ಕೋದಲ್ಲಿ ೨೨ ದಿನ(ಸೋವಿಯತ್‌ಲ್ಯಾಂಡ್ ನೆಹರೂ ಪ್ರಶಸ್ತಿ ಬಂದಿದೆ)
  • ಇಂಗ್ಲೆಂಡಿನಲ್ಲಿ ಚತುರ್ಮಾಸ
  • ಅಮೆರಿಕದಲ್ಲಿ ಕನ್ನಡಿಗ
  • ಗಂಗೆಯ ಶಿಖರಗಳಲ್ಲಿ

ಪ್ರಶಸ್ತಿ/ಪುರಸ್ಕಾರಗಳು

  • ಕೇಂದ್ರ ಸಾಹಿತ್ಯ ಅಕಾಡೆಮಿ-೧೯೮೪
  • ಪಂಪ ಪ್ರಶಸ್ತಿ
  • ಸೋವಿಯತ್‌ಲ್ಯಾಂಡ್ ನೆಹರೂ ಪ್ರಶಸ್ತಿ-೧೯೭೩
  • ದಾವಣಗೆರೆಯಲ್ಲಿ ನಡೆದ ೬೧ನೇ ಅಖಿಲ-ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ
  • ರಾಷ್ಟ್ರಕವಿ ಪುರಸ್ಕಾರ-೨೦೦೬
  • ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ೧೯೮೨
  • ನಾಡೋಜ ಕನ್ನಡ ವಿಶ್ವವಿದ್ಯಾಲಯ
  • ಗೌರವ ಡಾಕ್ಟರೇಟ್ : ಬೆಂಗಳೂರು ವಿ.ವಿ. ಮತ್ತು ಕುವೆಂಪು ವಿ.ವಿ.

ನಿಧನ

ಜಿ.ಎಸ್.ಶಿವರುದ್ರಪ್ಪನವರು ೨೩ ಡಿಸಂಬರ್ ೨೦೧೩ರಂದು ತಮ್ಮ ಬನಶಂಕರಿಯ ನಿವಾಸದಲ್ಲಿ ನಿಧನರಾದರು. ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಸ್ವರ್ಗಸ್ಥರಾದರು.

1 ಕಾಮೆಂಟ್‌:

Unknown ಹೇಳಿದರು...

ಹೀಗೆ ಇತರೆ ಕವಿಗಳ ಬಗ್ಗೆ ಮಾಹಿತಿ ನೀಡುತ್ತಾ ಇರಿ. ಧನ್ಯವಾದಗಳು