ಜಿ.ಎಸ್.ಶಿವರುದ್ರಪ್ಪ ರವರ ಭಾವಗೀತೆಗಳು - Lyrics fo G.S.Shivarudrappa


-ಡಾ. ಜಿ.ಎಸ್.ಶಿವರುದ್ರಪ್ಪ
ಕಾಣದ ಕಡಲಿಗೆ ಹಂಬಲಿಸಿದೆ ಮನ Kanada Kadalige
ಕಾಣದ ಕಡಲಿಗೆ ಹಂಬಲಿಸಿದೆ ಮನ
ಕಾಣಬಲ್ಲೆನೆ ಒಂದು ದಿನ ಕಡಲೊಳು
ಕೂಡಬಲ್ಲೆನೆ ಒಂದು ದಿನ || ಕಾ ||

ಕಾಣದ ಕಡಲಿನ ಮೊರೆತದ ಜೋಗುಳ ಒಳಗಿವಿಗಿಂದು ಕೇಳುತಿದೆ
ನನ್ನ ಕಲ್ಪನೆಯು ತನ್ನ ಕಡಲನೆ ಛಿದ್ರಿಸಿ ಚಿಂತಿಸಿ ಸುರಿಯುತಿದೆ
ಎಲ್ಲಿರುವುದೋ ಅದು ಎಂತಿರುವುದೋ ಅದು
ನೋಡಬಲ್ಲೆನೆ ಒಂದು ದಿನ ಕಡಲನು ಕೂಡಬಲ್ಲೆನೆ ಒಂದು ದಿನ || ಕಾಣದ ||

ಸಾವಿರ ಹೊಳೆಗಳು ತುಂಬಿ ಹರಿದರೂ ಒಂದೇ ಸಮನಾಗಿಹುದಂತೆ
ಸುನಿಲ ವಿಸ್ತರ ತರಂಗ ಶೋಭಿತ ಗಂಭೀರಾಂಬುಧಿ ತಾನಂತೆ
ಮುನ್ನೀರಂತೆ ಅಪಾರವಂತೆ
ಕಾಣಬಲ್ಲೆನೆ ಒಂದು ದಿನ ಅದರೊಳು ಕರಗಲಾರೆನೆ ಒಂದು ದಿನ || ಕಾಣದ ||

ಜಟಿಲ ಕಾನನದ ಕುಟಿಲ ಪಥಗಳಲಿ ಹರಿವ ತೊರೆಯು ನಾನು
ಎಂದಿಗಾದರೂ ಕಾಣದ ಕಡಲಿಗೆ ಸೇರಬಲ್ಲೆ ನೀನು
ಸೇರಬಹುದೇ ನಾನು ಕಡಲ ನೀಲಿಯೊಳು ಕರಗಬಹುದೇ ನಾನು || ಕಾಣದ ||

ಹಾಡು ಹಳೆಯದಾದರೇನು / Haadu haleyadaadarenu
ಹಾಡು...ಹಾಡು ...ಹಾಡು ಹಳೆಯದಾದರೇನು ಭಾವ ನವನವೀನ..
ಎದೆಯ ಭಾವ ಹೊಮ್ಮುವುದಕೆ ಭಾಷೆ ಒರಟು ಯಾನ....

ಹಳೆಯ ಹಾಡು ಹಾಡು ಮತ್ತೆ ಅದನೆ ಕೇಳಿ ತಣಿಯುವೆ
ಹಳೆಯ ಹಾಡಿನಿಂದ ಹೊಸತು ಜೀವನಾ ಕಟ್ಟುವೆ.....

ಹಮ್ಮು ಬಿಮ್ಮು ಒಂದೂ ಇಲ್ಲ ಹಾಡು ಹೃದಯ ತೆರೆದಿದೆ 
ಹಾಡಿನಲ್ಲಿ ಲೀನವಾಗಲೆನ್ನ ಮನವು ಕಾದಿದೆ......  
ಯಾವುದೀ ಪ್ರವಾಹವು? / Yaavudee pravahavu..
ಯಾವುದೀ ಪ್ರವಾಹವು?
ಮನೆಮನೆಗಳ ಕೊಚ್ಚಿ ಕೊರೆದು
ಬುಸುಗುಡುತ್ತ ಧಾವಿಸುತಿದೆ
ಯಾವುದೀ ಪ್ರವಾಹವು?

ಗುಡಿ ಗೋಪುರ ಉರುಳುತಿವೆ,
ಹಳೆಯ ಪ್ರತಿಮೆಗಳು ತೇಲುತಿವೆ.
ದೀಪವಾರಿ, ತಂತಿ ಹರಿದು
ವಾದ್ಯವೃಂದ ನರಳುತಿದೆ.

ಎದೆ ಎದೆಗಳ ನಡುವೆ ಇರುವ
ಸೇತುವೆಗಳು ಮುರಿದಿವೆ.
ಭಯ-ಸಂಶಯ- ತಲ್ಲಣಗಳ
ಕಂದರಗಳು ತೆರೆದಿವೆ.

ಮುಖ ಮುಖವೂ ಮುಖವಾಡವ
ತೊಟ್ಟು ನಿಂತ ಹಾಗಿದೆ.
ಆಡುತಿರುವ ಮಾತಿನೊಳಗೆ
ಹೃದಯ ಕಾಣದಾಗಿದೆ.

ನೀನು ಮುಗಿಲು ನಾನು ನೆಲ.. / neenu mugilu naanu nela
ನೀನು ಮುಗಿಲು, ನಾನು ನೆಲ.
ನಿನ್ನ ಒಲವೆ ನನ್ನ ಬಲ.
ನಮ್ಮಿಬ್ಬರ ಮಿಲನದಿಂದ ಉಲ್ಲಾಸವೇ ಶ್ಯಾಮಲಾ.

ನಾನು ಎಳೆವೆ, ನೀನು ಮಣಿವೆ,
ನಾನು ಕರೆವೆ, ನೀನು ಸುರಿವೆ.
ನಮ್ಮಿಬ್ಬರ ಒಲುಮೆ  ನಲುಮೆ ಜಗಕಾಯಿತು ಹುಣ್ಣಿಮೆ.
ನಾನಚಲದ ತುಟಿಯೆತ್ತುವೆ,
ನೀ ಮಳೆಯೊಲು ಮುತ್ತನಿಡುವೆ.
ನಿನ್ನಿಂದಲೇ ತೆರೆವುದೆನ್ನ ಚೈತನ್ಯದ ಕಣ್ಣೆವೆ.

ಸೂರ್ಯ ಚಂದ್ರ ಚಿಕ್ಕೆಗಣ್ಣ,
ತೆರೆದು ನೀನು ಸುರಿವ ಬಣ್ಣ.
ಹಸಿರಾಯಿತು ಹೂವಾಯಿತು ಚೆಲುವಾಯಿತು ಈ ನೆಲ.
ನೀನು ಗಂಡು, ನಾನು ಹೆಣ್ಣು,
ನೀನು ರೆಪ್ಪೆ, ನಾನು ಕಣ್ಣು.
ನಮ್ಮಿಬ್ಬರ ಮಿಲನದಿಂದ ಸುಫಲವಾಯ್ತು ಜೀವನ.
      
ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ/ Elli hoguviri nilli modagale
ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ
ನಾಲ್ಕು ಹನಿಯ ಚೆಲ್ಲಿ
ದಿನದಿನವು ಕಾದು ಬಾಯಾರಿ ಬೆಂದೆ
ಬೆಂಗದಿರ ತಾಪದಲ್ಲಿ .

              ನನ್ನೆದೆಯ ಹಸಿರ ಉಸಿರು ಕುಗ್ಗಿದರು
              ಬರಲಿಲ್ಲ ನಿಮಗೆ ಕರುಣ
              ನನ್ನ ಹೃದಯದಲಿ ನೋವು ಮಿಡಿಯುತಿದೆ
              ನಾನು ನಿಮಗೆ ಶರಣ.

ಬಡವಾಗದ ನನ್ನ ಒಡಲುರಿಯ ಬೇಗೆ 
ನಿಮಗರಿವು ಆಗಲಹುದೇ?
ನೀಲಗಗನದಲಿ ತೇಲಿ ಹೋಗುತಿಹ
ನಿಮ್ಮನೆಳೆಯಬಹುದೇ?

              ಬಾಯುಂಟು ನನಗೆ, ಕೂಗಬಲ್ಲೇನಾ
              ನಿಮ್ಮೆದೆಯ ಪ್ರೇಮವನ್ನು.
              ನೀವು ಕರುಣಿಸಲು ನನ್ನ ಹಸಿರೆದೆಯು
              ಉಸಿರುವುದು ತೋಷವನ್ನು.

ಓ ಬನ್ನಿ ಬನ್ನಿ, ಓ ಬನ್ನಿ ಬನ್ನಿ
ನನ್ನೆದೆಗೆ ತಂಪತನ್ನಿ,
ನೊಂದ ಜೀವರಿಗೆ ತಂಪನೀಯುವುದೇ
ಪರಮ ಪೂಜೆಯೆನ್ನಿ.

ಎಲ್ಲೋ ಹುಡುಕಿದೆ ಇಲ್ಲದ ದೇವರ / ello hudukide illada devara
ಎಲ್ಲೋ ಹುಡುಕಿದೆ ಇಲ್ಲದ ದೇವರ
ಕಲ್ಲು ಮಣ್ಣುಗಳ ಗುಡಿಯೊಳಗೆ
ಇಲ್ಲೇ ಇರುವ ಪ್ರೀತಿ ಸ್ನೇಹಗಳ
ಗುರುತಿಸದಾದೆನು ನಮ್ಮೊಳಗೆ ||

ಎಲ್ಲಿದೆ ನಂದನ, ಎಲ್ಲಿದೆ ಬಂಧನ
ಎಲ್ಲಾ ಇದೆ ಈ ನಮ್ಮೊಳಗೆ
ಒಳಗಿನ ತಿಳಿಯನು ಕಲಕದೆ ಇದ್ದರೆ
ಅಮೃತದ ಸವಿಯಿದೆ ನಾಲಿಗೆಗೆ ||

ಹತ್ತಿರವಿದ್ದೂ ದೂರ ನಿಲ್ಲುವೆವು
ನಮ್ಮ ಅಹಮ್ಮಿನ ಕೋಟೆಯಲಿ
ಎಷ್ಟು ಕಷ್ಟವೋ ಹೊಂದಿಕೆಯೆಂಬುದು
ನಾಲ್ಕುದಿನದ ಈ ಬದುಕಿನಲಿ ||

ಯಾವ ಹಾಡು ಹಾಡಲಿ
ಯಾವ ಹಾಡು ಹಾಡಲಿ ಯಾವ ಹಾಡಿನಿಂದ ನಿಮಗೆ
ನೆಮ್ಮದಿಯನು ನೀಡಲಿ?

ಸುತ್ತ ಮುತ್ತ ಮನೆ ಮಠಗಳು | ಹೊತ್ತಿಕೊಂಡು ಉರಿಯುವಲ್ಲಿ
ಸೋತು ಮೂಕವಾದ ಬದುಕು | ನಿಟ್ಟುಸಿರೊಳು ತೇಲುವಲ್ಲಿ
ಯಾವ ಹಾಡು ಹಾಡಲಿ || ||

ಬರಿ ಮಾತಿನ ಜಾಲದಲ್ಲಿ | ಶೋಷಣೆಗಳ ಶೂಲದಲ್ಲಿ
ವಂಚನೆಗಳ ಸಂಚಿನಲ್ಲಿ | ಹಸಿದ ಹೊಟ್ಟೆ ನೆರಳುವಲ್ಲಿ |
ಯಾವ ಹಾಡು ಹಾಡಲಿ || ||

ಉರಿವ ಕಣ್ಣ ಚಿತೆಗಳಲ್ಲಿ | ಇರುವ ಕನಸು ಸೀಯುವಲ್ಲಿ
ಎದೆ ಎದೆಗಳ ಜ್ವಾಲಾಮುಖಿ | ಹೊಗೆ ಬೆಂಕಿಯ ಕಾರುವಲ್ಲಿ
ಯಾವ ಹಾಡು ಹಾಡಲಿ || ||

ಬೆಳಕಿಲ್ಲದ ದಾರಿಯಲ್ಲಿ | ಪಾಳುಗುಡಿಯ ಸಾಲಿನಲ್ಲಿ
ಬಿರುಗಾಳಿಯ ಬೀಡಿನಲ್ಲಿ | ಕುರುಡ ಪಯಣ ಸಾಗುವಲ್ಲಿ
ಯಾವ ಹಾಡು ಹಾಡಲಿ || ||

ಕಾಣದ ಕಡಲಿಗೆ ಹಂಬಲಿಸಿದೆ ಮನ.... / kaanada kadalige
ಕಾಣದ ಕಡಲಿಗೆ ಹಂಬಲಿಸಿದೆ ಮನ....
ಕಾಣಬಲ್ಲೆನೆ ಒಂದು ದಿನ?
ಕಡಲನು ಕೂಡಬಲ್ಲೆನೆ ಒಂದು ದಿನ?
ಕಾಣದ ಕಡಲಿನ ಮೊರೆತದ ಜೋಗುಳ
ಒಳಗಿವಿಗಿಂದು ಕೇಳುತಿದೆ.
ನನ್ನ ಕಲ್ಪನೆಯು ತನ್ನ ಕಡಲನೆ
ಚಿತ್ರಿಸಿ ಚಿಂತಿಸಿ ಸುಯ್ಯುತಿದೆ.
ಎಲ್ಲಿರುವುದೋ ಅದು, ಎಂತಿರುವುದೋ ಅದು
ನೋಡಬಲ್ಲೆನೇ ಒಂದು ದಿನ,
ಕಡಲನು ಕೂಡಬಲ್ಲೆನೆ ಒಂದು ದಿನ?
ಸಾವಿರ ನದಿಗಳು ತುಂಬಿ ಹರಿದರೂ,
ಒಂದೇ ಸಮನಾಗಿಹುದಂತೆ.
ಸುನೀಲ, ವಿಸ್ತರ, ತರಂಗಶೋಭಿತ,
ಗಂಭೀರಾಂಬುಧಿ ತಾನಂತೆ.
ಮುನ್ನೀರಂತೆ, ಅಪಾರವಂತೆ.
ಕಾಣಬಲ್ಲೆನೆ ಒಂದು ದಿನ?
ಅದರೊಳು ಕರಗಲಾರೆನೆ ಒಂದು ದಿನ?
ಜಟಿಲ ಕಾನನದ ಕುಟಿಲ ಪಥಗಳಲಿ 
ಹರಿವ ತೊರೆಯು ನಾನು.
ಎಂದಿಗಾದರು ಕಾಣದ ಕಡಲನು
ಸೇರಬಲ್ಲೆನೇನು?
ಸೇರಬಹುದೇ ನಾನು?
ಕಡಲ ನೀಲಿಯೊಳು ಕರಗಬಹುದೇ ನಾನು?

ಎದೆತುಂಬಿ ಹಾಡಿದೆನು
ಎದೆತುಂಬಿ ಹಾಡಿದೆನು ಅಂದು ನಾನು,
ಮನವಿಟ್ಟು ಕೇಳಿದಿರಿ ಅಲ್ಲಿ ನೀವು

ಇಂದು ನಾ ಹಾಡಿದರು ಅಂದಿನಂತೆಯೆ ಕುಳಿತು 
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ.
ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ?

ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ,
ಕೇಳುವವರಿಹರೆಂದು ನಾ ಬಲ್ಲೆನದರಿಂದ
ಹಾಡುವೆನು ಮೈದುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರು ನನಗಿಲ್ಲ ಚಿಂತೆ.  

ಸ್ತ್ರೀ ಎಂದರೆ ಅಷ್ಟೇ ಸಾಕೆ ! / Stree Endare Aste Saake
ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ 
ಬೆಳಕನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೇ 
ಸ್ತ್ರೀ ಎಂದರೆ ಅಷ್ಟೇ ಸಾಕೆ || ||
ಹಸುರನುಟ್ಟ ಬೆಟ್ಟಗಳಲಿ ಮೊಲೆಹಾಲಿನ ಹೊಳೆಯನಿಳಿಸಿ 
ಬಯಲ ಹಸಿರ ನಗಿಸಿದಾಕೆ ನಿನಗೆ ಬೇರೆ ಹೆಸರು ಬೇಕೇ
ಸ್ತ್ರೀ ಎಂದರೆ ಅಷ್ಟೇ ಸಾಕೆ || ||
ಮರಗಿಡ ಹೂ ಮುಂಗುರುಳನು ತಂಗಾಳಿಯ ಬೆರಳ ಸವರಿ
ಹಕ್ಕಿ ಗಿಲಕಿ ಹಿಡಿಸಿದಾಕೆ ನಿನಗೆ ಬೇರೆ ಹೆಸರು ಬೇಕೇ 
ಸ್ತ್ರೀ ಎಂದರೆ ಅಷ್ಟೇ ಸಾಕೆ || ||
ಮನೆಮನೆಯಲಿ ದೀಪ ಉರಿಸಿ ಹೊತ್ತುಹೊತ್ತಿಗೆ ಅನ್ನ ಉಣಿಸಿ
ತಂದೆ ಮಗುವ ತಬ್ಬಿದಾಕೆ ನಿನಗೆ ಬೇರೆ ಹೆಸರು ಬೇಕೇ
ಸ್ತ್ರೀ ಎಂದರೆ ಅಷ್ಟೇ ಸಾಕೆ || ||



ಯಾವ ರಾಗಕೊ ಏನೊ ನನ್ನೆದೆ ವೀಣೆ ಮಿಡಿಯುತ ನರಳಿದೆ

ಯಾವ ರಾಗಕೊ ಏನೊ ನನ್ನೆದೆ ವೀಣೆ ಮಿಡಿಯುತ ನರಳಿದೆ
ಬಯಸುತಿರುವಾ ರಾಗ ಹೊಮ್ಮದೆ ಬೇರೆ ನಾದಗಳೆದ್ದಿವೆ

ಉದಯ ಅಸ್ತಗಳೆದೆಯ ಆಳಕೆ ಮುಳುಗಿ ಹುಡುಕಿತು ರಾಗವ
ಬಿಸಿಲ ಬೇಗೆಗೆ ತಣಿಲ ತಂಪಿಗೆ ಧುಮುಕಿ ಶೋಧಿಸಿ ಬಳಲಿತು
ಬೀಸಿಬಹ ಬಿರುಗಾಳಿಯಬ್ಬರದೆದೆಗೆ ತಂತಿಯ ಜೋಡಿಸಿ
ಅದರ ರಾಗವ ತನ್ನ ಎದೆಯಲಿ ಹಿಡಿಯಲೆಳಸುತ ಸೋತಿತು

ಮುಗಿಲ ತಾರೆಯ ರಜತನಂದನದಲ್ಲಿ ದನಿಯನು ಹುಡುಕಿತು
ಸರ್ವ ಋತುಗಳ ಕೋಶಕೋಶಕೆ ನುಗ್ಗಿ ತೃಪ್ತಿಯನರಸಿತು
ಏನು ಆದರು ದೊರೆಯದಾದುದು ಮನದ ಬಯಕೆಯ ರಾಗವು
ಬರಿಯ ವೇದನೆ ಎದೆಯ ತುಂಬಿದೆ, ಮೂಕವಾಗಿದೆ ಹೃದಯವು.

ನವೋದಯದ ಕಿರಣಲೀಲೆ
ನವೋದಯದ ಕಿರಣಲೀಲೆ
ಕನ್ನಡದೀ ನೆಲದ ಮೇಲೆ
ಶುಭೋದಯವ ತೆರೆದಿದೆ.

                                  ನದನದಿಗಳ ನೀರಿನಲ್ಲಿ
                                  ಗಿರಿವನಗಳ ಮುಡಿಗಳಲ್ಲಿ
                                  ಗಾನ ಕಲಾ ಕಾವ್ಯ ಶಿಲ್ಪ
                                  ಗುಡಿಗೋಪುರ ಶಿಖರದಲ್ಲಿ
                                  ಶುಭೋದಯವ ತೆರೆದಿದೆ.

ಮುಗ್ಧ ಜಾನಪದಗಳಲ್ಲಿ
ದಗ್ಧ ನಗರ ಗೊಂದಲದಲಿ
ಯಂತ್ರತಂತ್ರದ ಅಟ್ಟಹಾಸ
ಚಕ್ರಗತಿಯ ಪ್ರಗತಿಯಲ್ಲಿ
ಶುಭೋದಯವ ತೆರೆದಿದೆ.

                                  ಹಿರಿಯರಲ್ಲಿ ಕಿರಿಯರಲ್ಲಿ
                                  ಹಳಬರಲ್ಲಿ ಹೊಸಬರಲ್ಲಿ
                                  ನವಚೇತನದುತ್ಸಾಹದ
                                  ಚಿಲುಮೆಚಿಮ್ಮುವೆದೆಗಳಲ್ಲಿ
                                  ಶುಭೋದಯವ ತೆರೆದಿದೆ.

                                                                                         - ಜಿ. ಎಸ್. ಶಿವರುದ್ರಪ್ಪ

12 ಕಾಮೆಂಟ್‌ಗಳು:

ಅಪೂರ್ವ ಹೇಳಿದರು...

ಕನ್ನಡ ತಾಯಿಗೆ ಆಕಾಶದೆತ್ತರ ಸೇವೆ. ಮುಂದುವರೆಸಿ' ಧನ್ಯವಾದ.

Unknown ಹೇಳಿದರು...

'ಮಾಯಾಜಿಂಕೆ ಎಲ್ಲಿ ಮಾಯವಾದೆ' ಗೀತೆ ಒದಗಿಸಿ

Unknown ಹೇಳಿದರು...

Powerful

Unknown ಹೇಳಿದರು...

SUPER

Unknown ಹೇಳಿದರು...

Pls upload nanna hanathe poem

Shubhakara ಹೇಳಿದರು...

ಸರ್ ನಂಗೆ ಕನ್ನಡ ಜಿಸ್ ಶಿವರುದ್ರಪ್ಪ ನವರ ಪ್ರೀತಿ ಎಂದರೇನು ಲಿರಿಕ್ಸ್ ಸಿಗ್ಸ್ಬಹುದೇ

Unknown ಹೇಳಿದರು...

ದಯವಿಟ್ಟು ಜಿ ಎಸ್ ಎಸ್ ರವರ "ಈ ಮನೆಯ ನೆಲದಲ್ಲಿ ಪುಟಿದು ಚಿಮ್ಮೂತಲಿರುವ ದೇವಲೋಕದ ದಿವ್ಯ " ಕವನದ ಸಾಲುಗಳು ಇದ್ದರೆ, ಸಿಕ್ಕಿದರೆ ಕವನವನ್ನು ದಯವಿಟ್ಟು ಹಂಚಿಕೊಳ್ಳಿ.

Unknown ಹೇಳಿದರು...

Chanagide yella kavitegalu, nanna project ge help aytu , saadya adre dara bavartanu collect madi help agutte project ge yella

Unknown ಹೇಳಿದರು...

ಎಲ್ಲೊ ಹುಡುಕಿದೆ ಇಲ್ಲದ ದೇವರ,, ಈ ಭಾವಗಿeತಯ ಅರ್ಥ ತಿಳಿಸಿ

Unknown ಹೇಳಿದರು...

Super

Unknown ಹೇಳಿದರು...

Can you send summary of all

Meena ಹೇಳಿದರು...

Can you include Hakkiya hadu